ಕಾಫಿನಾಡಲ್ಲಿ ಮಳೆಯ ಆರ್ಭಟ... ಕಲ್ಲತ್ತಿಗಿರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನ ಜಲಾವೃತ - ಕಲ್ಲತ್ತಗಿರಿ ಫಾಲ್ಸ್
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಹಾಗೂ ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕಲ್ಲತ್ತಗಿರಿಯಲ್ಲಿರುವ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಎರಡು ದಿನಗಳ ಹಿಂದೆ 10ಕ್ಕೂ ಹೆಚ್ಚು ಭಕ್ತಾದಿಗಳು ದೇವಸ್ಥಾನದ ಆವರಣದಲ್ಲಿ ಸಿಲುಕಿಕೊಂಡಿದ್ದರು. ಕಲ್ಲತ್ತಿಗಿರಿಯಲ್ಲಿ ನೀರು ಹೆಚ್ಚಳವಾಗಿದ್ದು, ಪ್ರವಾಹದ ರೀತಿಯಲ್ಲಿ ಕಲ್ಲತ್ತಗಿರಿ ಫಾಲ್ಸ್ ಹರಿಯುತ್ತಿದೆ. ದೇವಸ್ಥಾನಕ್ಕೆ ಹೋಗಲು ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದ್ದು, ಇಂದು ನೀರಿನ ಹರಿವಿನಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.