ಎಡಬಿಡದೆ ಸುರಿಯುತ್ತಿದೆ ಮಳೆ: ಮುಳುಗುವ ಹಂತದಲ್ಲಿ ಹೆಬ್ಬಾಳೆ ಸೇತುವೆ - ಚಿಕ್ಕಮಗಳೂರು ಜಿಲ್ಲೆ
ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಮಲೆನಾಡು ಭಾಗ ಹಾಗೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರೆ ತುಂಬಿ ಹರಿಯುತ್ತಿದ್ದು, ಕಳಸದ ಬಳಿ ಇರುವ ಹೆಬ್ಬಾಳೆ ಸೇತುವೆ ಮುಳುಗುವ ಹಂತಕ್ಕೆ ತಲುಪುತ್ತಿದೆ.