ಮಂಗಳೂರಲ್ಲಿ ಮತ್ತೆ ವರುಣನಾರ್ಭಟ... ಭಾರಿ ಮಳೆಗೆ ಜನ ತತ್ತರ - ಮಂಗಳೂರು
ಮಂಗಳೂರಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯಿಂದ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಕಳೆದ ಮೂರು ದಿನಗಳಿಂದ ಇಂದಿನವರೆಗೆ ಆರೆಂಜ್ ಅಲರ್ಟ್ ಘೋಷಿಸಿತ್ತು. ಇಂದು ಸುರಿಯುತ್ತಿರುವ ಮಳೆಯಿಂದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.