ಧಾರವಾಡದಲ್ಲಿ ಗುಡುಗು ಸಹಿತ ಧಾರಕಾರ ಮಳೆ... - dharwad heavey rain
ಧಾರವಾಡ: ಒಂದು ಗಂಟೆಗೂ ಅಧಿಕ ಕಾಲ ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಗುಡುಗು,ಸಿಡಿಲು,ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಮಳೆರಾಯನ ಅಬ್ಬರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರಸ್ತೆ ಮೇಲೆ ನೀರು ಹರಿದಿದೆ. ನಿರಂತರ ಒಂದು ಗಂಟೆಯಿಂದ ಸುರಿದ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮಳೆಯಿಂದ ಹಿಂಗಾರು ಬಿತ್ತನೆಗೆ ತೊಂದರೆಯಾಗುತ್ತಿದ್ದು, ಇದರಿಂದ ರೈತವರ್ಗ ಕಂಗಾಲಾಗಿದೆ.