ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಭಾರೀ ಮಳೆ: ಬದಾಮಿ-ಹೊಳೆ ಆಲೂರು ಮಧ್ಯೆ ಸಂಪರ್ಕ ಕಡಿತ - ಗದಗ ಜಿಲ್ಲೆಯ ಹೊಳೆ ಆಲೂರು
ಗದಗ: ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದ ಬಳಿಯ ಸೇತುವೆ ಜಲಾವೃತವಾಗಿದ್ದು ಸಂಚಾರ ಬಂದ್ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ ಹಾಗೂ ಗದಗ ಜಿಲ್ಲೆಯ ಹೊಳೆ ಆಲೂರು ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಮಳೆ ಹೀಗೆ ಮುಂದುವರೆದರೆ ಇನ್ನೂ ಒಂದೆರಡು ದಿನ ಸಂಪರ್ಕ ಸ್ಥಗಿತ ಹೀಗೆ ಮುಂದುವರೆಯುವ ಸಾಧ್ಯತೆ ಇದೆ.