ಹಾಸನದಲ್ಲಿ ಬೆಳಗ್ಗೆಯಿಂದಲೇ ಬಿಡದೇ ಸುರಿಯುತ್ತಿರುವ ವರುಣ.. ಜನಜೀವನ ಅಸ್ತವ್ಯಸ್ತ
ಹಾಸನ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಮಂಗಳವಾರ ಬೆಳಗ್ಗೆಯಿಂದಲೇ ಬಿಟ್ಟೂಬಿಡದೇ ಸುರಿಯುತ್ತಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಜನರ ದೈನಂದಿನ ಕೆಲಸಗಳಿಗೂ ಮಳೆ ಕಿರಿಕಿರಿ ಉಂಟುಮಾಡಿದೆ. ಜಿಲ್ಲೆಯಲ್ಲಿ ಮಳೆರಾಯನ ಅವಕೃಪೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ.