ಹುಬ್ಬಳ್ಳಿಯಲ್ಲಿ ಮತ್ತೆ ಮುಂದುವರೆದ ಮಳೆರಾಯನ ಅಬ್ಬರ.. ಜನಜೀವನ ಅಸ್ತವ್ಯಸ್ತ
ಹುಬ್ಬಳ್ಳಿ : ಕಳೆದ ಮೂರು ದಿನಗಳಿಂದ ಬಿಡುವು ನೀಡಿದ್ದ ಮಳೆಯ ಅಬ್ಬರ ಮತ್ತೆ ಮುಂದುವರೆದಿದೆ. ಕಳೆದ ಅರ್ಧ ಗಂಟೆಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ವಾಣಿಜ್ಯ ನಗರಿಯ ರಸ್ತೆಗಳು ನೀರಿನಿಂದ ತುಂಬಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆ ಬದಿಯ ವ್ಯಾಪಾರಿಗಳು ಹಾಗೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.