ಕೊಡಗಿನಲ್ಲಿ ಉತ್ತಮ ಮಳೆ..ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ - heavy rain in kodagu
ಕೊಡಗು: ಜಿಲ್ಲೆಯಲ್ಲಿ ಇಂದು ಉತ್ತಮ ಮಳೆಯಾಗಿದೆ. ಕಳೆದೊಂದು ವಾರದಿಂದ ಬಿಡುವು ಕೊಟ್ಟಿದ್ದ ವರುಣ, ಇಂದು ಮಧ್ಯಾಹ್ನದ ಬಳಿಕ ಬಿರುಸು ಪಡೆದುಕೊಂಡಿದೆ. ರಾಜ್ಯ ಹವಾಮಾನ ಇಲಾಖೆ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ತಲಕಾವೇರಿ, ಬ್ರಹ್ಮಗಿರಿ, ಭಾಗಮಂಡಲ, ವಿರಾಜಪೇಟೆ, ನಾಪೋಕ್ಲು ಸೇರಿದಂತೆ ಸೋಮವಾರಪೇಟೆ ಮತ್ತು ಮಡಿಕೇರಿ ತಾಲೂಕಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆ ಆಗುತ್ತಿದೆ. ಇದರಿಂದ ಹಾರಂಗಿ ಜಲಾಶಯದ ನೀರಿನ ಒಳ ಹರಿವಿನಲ್ಲೂ ಹೆಚ್ಚಳವಾಗಿದೆ.