ಅರಬ್ಬೀ ಸಮುದ್ರ, ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ, ಕೊಡಗಿನಲ್ಲಿ ಧಾರಾಕಾರ ಮಳೆ
ಅರಬ್ಬೀ ಸಮುದ್ರ ಹಾಗೂ ಲಕ್ಷ ದೀಪಗಳಲ್ಲಿ ವಾಯುಭಾರ ಕುಸಿತದ ಹಿನ್ನಲೆ ಜಿಲ್ಲೆಯ ಮೇಲೂ ಅದರ ಪರಿಣಾಮ ವ್ಯಕ್ತವಾಗಿದ್ದು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಹಲವೆಡೆ ಜೋರು ಮಳೆ ಆಗುತ್ತಿದೆ. ವಿರಾಜಪೇಟೆ ವ್ಯಾಪ್ತಿಯ ಬ್ರಹ್ಮಗಿರಿ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ಸೇರಿದಂತೆ ಹಲವೆಡೆ ವರ್ಷಾಧಾರೆ ಆಗುತ್ತಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಸ್ಥಳೀಯರಲ್ಲಿ ಆತಂಕವನ್ನೂ ಸೃಷ್ಟಿಸಿದೆ.