ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆ ಆರ್ಭಟ: ಬಡಾವಣೆಗಳು ಜಲಾವೃತ - rain news shimoga
ಶಿವಮೊಗ್ಗ: ಕೆಲದಿನಗಳ ಹಿಂದಷ್ಟೇ ಮನಸೋಇಚ್ಛೆ ಸುರಿದು ಜನಜೀವನ ಅಸ್ತವ್ಯಸ್ತಗೊಳಿಸಿದ್ದ ವರುಣ ಈಗ ಮತ್ತೆ ಆರ್ಭಟಿಸುತ್ತಿದ್ದಾನೆ. ಹೀಗಾಗಿ ಶಿವಮೊಗ್ಗದ ಜನ ಆತಂಕಕ್ಕೀಡಾಗಿದ್ದಾರೆ. ನಿನ್ನೆ ರಾತ್ರಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ನಗರದ ಹಲವಾರು ಬಡಾವಣೆಗಳು ಜಲಾವೃತವಾಗಿದ್ದು, ಇನ್ನಷ್ಟು ಸಮಸ್ಯೆಗಳು ಸೃಷ್ಠಿಯಾಗುವ ಸಾಧ್ಯತೆ ಇದೆ.