ಶಿವಮೊಗ್ಗದಲ್ಲಿ ಉತ್ತಮ ಮಳೆ: ನಿಟ್ಟುಸಿರು ಬಿಟ್ಟ ರೈತರು - ಶಿವಮೊಗ್ಗದಲ್ಲಿ ಧಾರಾಕಾರ ಮಳೆ
ಶಿವಮೊಗ್ಗ: ಜಿಲ್ಲೆಯ ಹಲವೆಡೆ ಇಂದು ಮಳೆರಾಯನ ಆಗಮನವಾಗಿದೆ. ಆತಂಕದಲ್ಲಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಜಿಲ್ಲೆಯಾದ್ಯಂತ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಕಾರಣ ರೈತರು ಬಿತ್ತನೆ ಕಾರ್ಯ ಮುಗಿಸಿದ್ದರು. ಅದಾದ ನಂತರ ಮಳೆ ಕೈಕೊಟ್ಟಿತ್ತು. ಇಂದು ಸುರಿದ ಮಳೆಯಿಂದಾಗಿ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.