ಉಡುಪಿಯಲ್ಲಿ ಭಾರಿ ಮಳೆ... 5 ದಿನ ಯೆಲ್ಲೋ ಅಲರ್ಟ್ ಘೋಷಣೆ - ಉಡುಪಿ ಜಿಲ್ಲೆ ಸುದ್ದಿ
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. 5 ದಿನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಇಂದಿನಿಂದ ಮುಂದಿನ ನಾಲ್ಕು ದಿನಗಳವರೆಗೆ ಅಲರ್ಟ್ ಇದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೋಡ ಮುಸುಕಿದ ವಾತಾವರಣವಿದ್ದು, ಹಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.