ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆ: ಮತ್ತೆ ನೆರೆ ಹಾವಳಿ ಆತಂಕ - ಮಳೆ
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಭಾನುವಾರವೂ ಕೂಡಾ ಮುಂದುವರಿದೆ. ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಮತ್ತೆ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಬಹುತೇಕ ತಗ್ಗು ಪ್ರದೇಶಗಳು ಮತ್ತೆ ಜಲಾವೃತಗೊಂಡಿದ್ದು, ಜನ ಸಂಚಾರಕ್ಕೆ ತೊಂದರೆಯಾಗಿದೆ. ಅಲ್ಲದೆ ಹೀಗೇ ಮಳೆ ಮುಂದುವರಿದಲ್ಲಿ ಮತ್ತೆ ನೆರೆಹಾವಳಿ ಸೃಷ್ಟಿಯಾಗುವ ಆತಂಕ ಎದುರಾಗಿದೆ.