ವಿಜಯಪುರ ಜಿಲ್ಲಾದ್ಯಂತ ಮಳೆರಾಯನ ಅಬ್ಬರ: ಜನಜೀವನ ಅಸ್ತವ್ಯಸ್ಥ - rain news vijaypura
ಜಿಲ್ಲೆಯಾದ್ಯಂತ ಶನಿವಾರ ರಾತ್ರಿಯಿಡೀ ವರುಣನ ಆರ್ಭಟ ಜೋರಾಗಿತ್ತು. ಬಸವನ ಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ತಾಲೂಕು ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಸುರಿದಿದೆ. ಅಕಾಲಿಕ ಮಳೆಯಿಂದಾಗಿ ಜನಜೀವನಕ್ಕೆ ತೊಂದರೆಯಾಗಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ಇತರೆ ಬೆಳೆಗಳು ಹಾನಿಗೀಡಾಗುವ ಆತಂಕದಲ್ಲಿ ರೈತರಿದ್ದಾರೆ.