ಮೈಸೂರಿನಲ್ಲಿ ಧಾರಾಕಾರ ಮಳೆ: ಕೆರೆಯಂತಾದ ರಸ್ತೆಗಳು, ವಿಡಿಯೋ - ಮೈಸೂರು ಸುದ್ದಿ
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಧಾರಾಕಾರ ಮುಂಗಾರು ಮಳೆ ಆಗಿದೆ. ರಸ್ತೆಗಳೆಲ್ಲಾ ನೀರು ತುಂಬಿ ಸಂಚರಿಸಲಾಗದೆ ವಾಹನ ಸವಾರರು ಪರದಾಡಿದರು. ಸತತ 2 ಗಂಟೆಗೂ ಹೆಚ್ಚು ಕಾಲ ಸುರಿದ ವರ್ಷಧಾರೆಗೆ ದೊಡ್ಡ ಗಡಿಯಾರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜಲಾವೃತವಾಗಿದ್ದವು. ಪ್ರಮುಖ ರಸ್ತೆಗಳಲ್ಲಿ ಒಳ ಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಹೀಗಾಗಿ, ರಸ್ತೆಯಲ್ಲೇ ನೀರು ನಿಲ್ಲುತ್ತಿದೆ. ಭಾನುವಾರವಾದ್ದರಿಂದ ವಾಹನ ಹಾಗೂ ಜನ ಸಂಚಾರ ವಿರಳವಾಗಿತ್ತು.