ಮಂಡ್ಯದಲ್ಲಿ ಆಲಿಕಲ್ಲು ಸಹಿತ ಮಳೆ... - ಮಂಡ್ಯದಲ್ಲಿ ಮಳೆ
ಮಂಡ್ಯ: ಜಿಲ್ಲೆಯಲ್ಲಿ ಶುಕ್ರವಾರ ವರುಣನ ಆರ್ಭಟದಿಂದ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸಂಜೆ 6.30 ಗಂಟೆ ಸುಮಾರಿಗೆ ಮಂಡ್ಯ ಭಾಗದಲ್ಲಿ ಏಕಾಏಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.