ಚಿಕ್ಕಮಗಳೂರಲ್ಲಿ ವರುಣನ ಆರ್ಭಟ.. ತುಂಗಾ, ಭದ್ರಾ, ಹೇಮಾವತಿ ನದಿ ನೀರಿನ ಮಟ್ಟ ಏರಿಕೆ - ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ
ಚಿಕ್ಕಮಗಳೂರು: ನಗರ ಸೇರಿದಂತೆ, ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಮತ್ತೆ ಧಾರಾಕಾರವಾಗಿ ಮಳೆ ಸುರಿಯಲು ಪ್ರಾರಂಭವಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿರುವ ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟದಲ್ಲಿ ಹೆಚ್ಚಳ ಉಂಟಾಗಿದೆ. ಈಗಾಗಲೇ ಹೊರನಾಡು ಹಾಗೂ ಕಳಸ ಸಂಪರ್ಕಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಶೃಂಗೇರಿಯ ತುಂಗಾ ನದಿಯಲ್ಲಿಯೂ ನೀರಿನ ಮಟ್ಟ ಹೆಚ್ಚಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
Last Updated : Sep 20, 2020, 4:19 PM IST