ಚಿಕ್ಕಮಗಳೂರಿನಲ್ಲಿ ಮತ್ತೆ ಮುಂದುವರೆದ ವರುಣನ ಅಬ್ಬರ - ಮಳೆ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಕೂಡ ಮಳೆ ಮುಂದುವರೆದಿದೆ. ಇಂದು ಬೆಳಗ್ಗೆಯಿಂದಲೇ ಶೃಂಗೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ತುಂಗಾ ನದಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಜಿಲ್ಲೆಯ ಕೊಪ್ಪ, ಎನ್ಆರ್ ಪುರ, ಜಯಪುರ, ಬಣಕಲ್, ಕೊಟ್ಟಿಗೆಹಾರ ಭಾಗದಲ್ಲಿಯೂ ನಿರಂತರ ಮಳೆ ಸುರಿಯುತ್ತಿದ್ದು, ಕೆಲ ಭಾಗದಲ್ಲಿ ಮರಗಳು ಧರೆಗುರುಳಿ, ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ. ಜಿಲ್ಲೆಯಲ್ಲಿ ಹರಿಯುವ ಎಲ್ಲಾ ನದಿಗಳ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಕುರಿತು ಈಟಿವಿ ಭಾರತದ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.