ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ.. ಉಕ್ಕಿ ಹರಿದ ದರ್ಪಣ ತೀರ್ಥ ನದಿ.. - ಏಕಾಏಕಿ ಉಕ್ಕಿ ಹರಿದ ನದಿ
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಶ್ರೀಕ್ಷೇತ್ರ ಕುಕ್ಕೆ ದೇವಾಲಯದ ಹತ್ತಿರ ಹರಿಯುವ ದರ್ಪಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಸುಮಾರು ಮೂರು ಗಂಟೆಗಳಿಂದ ಮಳೆ ಸುರಿಯುತ್ತಿರುವ ಪರಿಣಾಮ ನದಿ ಉಕ್ಕಿ ಹರಿದಿದೆ. ಇದರಿಂದಾಗಿ ನದಿಪಾತ್ರದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.