ದ.ಕ.ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ - Dakshinakanda rain news
ಮಂಗಳೂರು (ದಕ್ಷಿಣಕನ್ನಡ): ಜಿಲ್ಲೆಯಲ್ಲಿ ಕೆಲದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಗ್ಗೆ 8.30 ರಿಂದ ಸೋಮವಾರ ಬೆಳಗ್ಗೆ 8.30 ವರೆಗೆ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರ ಮತ್ತು ಭಾನುವಾರ ಕ್ರಮವಾಗಿ 115.6 ಮಿ.ಮೀ, 204.4 ಮಿ.ಮೀ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.