ಹಾವೇರಿ ಜಿಲ್ಲೆಯಾದ್ಯಂತ ಭಾರಿ ಮಳೆ: ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ - ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ..ವಿಡಿಯೋ
ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಮೇತ ಧಾರಾಕಾರ ಮಳೆಯಾಗಿದೆ. ಹಾವೇರಿ ನಗರ, ಸವಣೂರು ತಾಲೂಕಿನ ಮೆಳಾಗಟ್ಟಿ, ಕುರುಬರಮಲ್ಲೂರು, ಕಿತ್ತೂರು, ಮರಡೂರು, ಸೇರಿದಂತೆ ಹಲವೆಡೆ ವರುಣ ಅಬ್ಬರಿಸಿದ್ದಾನೆ. ರಾಣೆಬೆನ್ನೂರು ತಾಲೂಕಿನ ಕೆರಿಮಲ್ಲಾಪುರ ಗ್ರಾಮದಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿದಿದೆ. ಬಿರುಗಾಳಿ, ಗುಡುಗು ಸಿಡಿಲು ಹೆಚ್ಚಾದ ಪರಿಣಾಮ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.