ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ - ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ರ‍್ಯಾಲಿ
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ರಾಜಭವನ ಚಲೋ ಬೃಹತ್ ಪ್ರತಿಭಟನಾ ರ‍್ಯಾಲಿ ಆರಂಭಿಸಿದ್ದು, ನಗರದಲ್ಲಿ ಸಂಚಾರ ದಟ್ಟಣೆ ಕಾಡುತ್ತಿದೆ. ಸದ್ಯ ಬೆಂಗಳೂರು ಕೇಂದ್ರ ರೈಲ್ವೆ ನಿಲ್ದಾಣ ಮುಂಭಾಗ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಈಗಾಗಲೇ ಕೆಂಪೇಗೌಡ ಬಸ್ ನಿಲ್ದಾಣ ಸುತ್ತಮುತ್ತ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ.