ರಾಜ್ಯದಲ್ಲೂ ಕೊರೊನಾ ವೈರಸ್ ಭೀತಿ: ಕಿಮ್ಸ್ ಆಸ್ಪತ್ರೆಯಲ್ಲಿ ಹೈ ಅಲರ್ಟ್ - ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂತರತಾನಿ
ಹುಬ್ಬಳ್ಳಿ: ರಾಜ್ಯದಲ್ಲಿ ಕೂಡಾ ಕೊರೊನಾ ವೈರಸ್ ಭೀತಿ ಹಿನ್ನೆಲೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕಿಮ್ಸ್ಗೆ ದಾಖಲಾಗುವ ರೋಗಿಗಳ ಬಗ್ಗೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಕಿಮ್ಸ್ನಲ್ಲಿ ವಿಶೇಷ ವಾರ್ಡ್ಗಳನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ರೀತಿಯ ಕ್ರಮಗಳನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ. ಈ ಬಗ್ಗೆ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂತರತಾನಿ ಮಾಹಿತಿ ನೀಡಿದ್ದಾರೆ.