ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ: ವಾಹನ ಸವಾರರಲ್ಲಿ ಹೆಚ್ಚಿದ ಭೀತಿ
ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಚಾರ್ಮುಡಿ ಘಾಟ್ ರಸ್ತೆಯಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತ ಉಂಟಾಗುತ್ತಿದೆ. ಇಂದು ಬೆಳಗ್ಗೆಯಿಂದಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಮಣ್ಣು ತೆರವು ಮಾಡುವ ಕಾರ್ಯ ದಲ್ಲಿ ತೊಡಗಿದ್ದಾರೆ. ನಿರಂತರವಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭೂ ಕುಸಿತ ಹಾಗೂ ಗುಡ್ಡ ಕುಸಿತ ಉಂಟಾಗುತ್ತಿರುವ ಹಿನ್ನೆಲೆ, ಇದನ್ನು ನೋಡುತ್ತಿರುವ ವಾಹನ ಸವಾರರು ನಲುಗಿ ಹೋಗಿದ್ದಾರೆ. ಈ ಕುರಿತು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.