ಕೊರೊನಾ ಮುಂಜಾಗ್ರತೆ: ಕೂಡಲಸಂಗಮದಲ್ಲಿ 'ಸಂಕ್ರಾಂತಿ' ಪುಣ್ಯಸ್ನಾನ ನಿಷೇಧ - holy dip Prohibition
ಬಾಗಲಕೋಟೆ: ಮಕರ ಸಂಕ್ರಾಂತಿ ಹಿನ್ನೆಲೆ ಧಾರ್ಮಿಕ ಕ್ಷೇತ್ರ ಕೂಡಲಸಂಗಮಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ. ಆದರೆ ಕೊರೊನಾ ಹಿನ್ನೆಲೆ, ಮೂರು ನದಿಗಳ ಸಂಗಮವಾಗಿರುವ ನೀರಿನಲ್ಲಿ ಪುಣ್ಯಸ್ನಾನ ಮಾಡುವುದಕ್ಕೆ ನಿಷೇಧ ಹೇರಲಾಗಿದ್ದು, ಸಂಗಮನಾಥನ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನದಿ ತಟಕ್ಕೆ ತಡೆಗೋಡೆ ನಿರ್ಮಾಣ ಮಾಡಿದ್ದು, ಭಕ್ತರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ಈ ಮೂರು ನದಿಗಳ ಸಂಗಮವಾಗಿದ್ದರಿಂದ ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದರು. ಆದರೆ ಈ ಬಾರಿ ಪುಣ್ಯಸ್ನಾನ ನಿಷೇಧಿಸಿರುವುದು ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ.