ನ್ಯಾಯಬದ್ಧವಾಗಿ ಕರ್ತವ್ಯ ನಿರ್ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವರ ಸೂಚನೆ - ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
ಕಲಬುರಗಿ: ನಗರದ ನಾಗೇನಹಳ್ಳಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪಿಎಸ್ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ನಡೆಯಿತು. ಈ ನಿರ್ಗಮನ ಪಥಸಂಚಲನದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ವಿವಿಧ ತುಕಡಿಗಳ ಗೌರವ ವಂದನೆ ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಾದಂತೆ ಸಂಘರ್ಷಗಳು ಹೆಚ್ಚಾಗುತ್ತಿವೆ. ಸಂಘರ್ಷ ಹತ್ತಿಕ್ಕಿ ಸಮಾನತೆ ತರುವ ಜವಾಬ್ದಾರಿ ಪೊಲೀಸರ ಮೇಲಿದೆ. ನ್ಯಾಯಬದ್ಧವಾಗಿ ಕರ್ತವ್ಯ ನಿರ್ವಹಣೆ ಮಾಡಿ ಎಂದು ಬೊಮ್ಮಾಯಿ ಕರೆ ನೀಡಿದರು. ಇದೆ ವೇಳೆ ಪ್ರಶಿಕ್ಷಣಾರ್ಥಿ ತರಬೇತುದಾರಿಗೆ ಬಹುಮಾನ ವಿತರಿಸಲಾಯಿತು.ಪಥಸಂಚಲನದಲ್ಲಿ ಪಿ.ಎಸ್.ಐ.(ಸಿವಿಲ್) 9ನೇ ತಂಡ, ಪಿ.ಎಸ್.ಐ. ಗುಪ್ತವಾರ್ತೆ, ಪಿ.ಎಸ್.ಐ. ಸಿಐಡಿ 2ನೇ ತಂಡ, ಆರ್.ಎಸ್.ಐ. ಸ್ಪೆಷಲ್ 4 ನೇ ತಂಡದ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.