ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಕತೃ ಗದ್ದುಗೆ ದರ್ಶನ ಪಡೆದ ಬೊಮ್ಮಾಯಿ - ಗೃಹ ಸಚಿವ ಬಸವರಾಜ ಬೊಮ್ಮಾಯಿ
ಕೊಪ್ಪಳ: ಐತಿಹಾಸಿಕ ಹಾಗೂ ಸುಪ್ರಸಿದ್ಧ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಕತೃ ಗದ್ದುಗೆಯ ದರ್ಶನ ಪಡೆದರು. ಇದೇ ವೇಳೆ ಶ್ರೀಮಠದ ಪರಂಪರೆಯ ಕುರಿತು ಶ್ರೀಮಠದವರು ಬೊಮ್ಮಾಯಿಗೆ ಮಾಹಿತಿ ನೀಡಿದರು. ಐಜಿಪಿ ಎಂ. ನಂಜುಂಡಸ್ವಾಮಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸ್ಥಳೀಯ ಬಿಜೆಪಿ ಮುಖಂಡರು ಸಚಿವ ಬಸವರಾಜ ಬೊಮ್ಮಾಯಿಗೆ ಸಾಥ್ ನೀಡಿದರು.