ದಾವಣಗೆರೆಯಲ್ಲಿ ಗಾಳಿ-ಮಳೆಗೆ ಮನೆ ಕುಸಿತ: ಸ್ಥಳಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ - Rain in Davanagere
ದಾವಣಗೆರೆ: ಭಾರಿ ಮಳೆ ಹಾಗೂ ಗಾಳಿಯಿಂದಾಗಿ ಮನೆ ಕುಸಿದು ಬಿದ್ದ ಘಟನೆ ಹೊನ್ನಾಳಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಲ್ಲಿಗೇನಹಳ್ಳಿ ಗ್ರಾಮದ ಗೌಡ್ರು ಹರೀಶ್ ಎಂಬುವವರ ಮನೆಯ ಗೋಡೆ ಕುಸಿದಿದ್ದು, ಸ್ಥಳಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ವರದಿ ನೀಡುವಂತೆ ಸೂಚನೆ ನೀಡಿದರಲ್ಲದೇ, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.