ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದ ರೇಣುಕಾಚಾರ್ಯ... ಆದ್ರೆ...? - ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ
ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಚಿವ ಸ್ಥಾನ ಪಡೆಯುವುದಕ್ಕೆ ಎಲ್ಲಿ ಮನವಿ ಸಲ್ಲಿಸಬೇಕು ಅಲ್ಲಿ ಸಲ್ಲಿಸುತ್ತೇನೆ. ಬೀದಿ ರಂಪಾಟ ಮಾಡುವುದಿಲ್ಲ. ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿರುವ ಯಡಿಯೂರಪ್ಪ ಸಮರ್ಥ ನಾಯಕರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಅಗತ್ಯವಿಲ್ಲ. ಈಗ ಇರುವ ಡಿಸಿಎಂ ಸ್ಥಾನ ವಜಾಗೊಳಿಸಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ನಾನು ಮನವಿ ಮಾಡುತ್ತೇನೆ ಎಂದು ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.