ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ - ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಧಾರವಾಡ: ಗೌರಿಶಂಕರ ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ವಸತಿ ನಿಲಯದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳಾದ ಮಿಥುನ್ ರಾಥೋಡ ಹಾಗೂ ಧನಕಪ್ಪ ಅವರ ಮೇಲೆ ಹೊರಗಿನ ವ್ಯಕ್ತಿಗಳಾದ ಯಲ್ಲಪ್ಪ, ನಾಗರಾಜ ಪಟ್ಟದ ಸೇರಿದಂತೆ ಹಲವರು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿಗೆ ದೂರು ನೀಡಿದರು. ಈ ಕುರಿತು ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಇದುವರೆಗೂ ಪೊಲೀಸರು ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಮನವಿ ಸಲ್ಲಿಸಿದರು.