ಕರ್ಫ್ಯೂ ಜಾರಿಗೂ ಮುನ್ನ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಹೋಟೆಲ್ ಮಾಲೀಕರು, ಸಾರ್ವಜನಿಕರ ಆಕ್ರೋಶ
ಬೆಂಗಳೂರು: ಕೊರೊನಾ ನಿಯಂತ್ರಿಸಲು ಸರ್ಕಾರ ಜಾರಿಗೆ ತಂದಿರುವ ಭಾನುವಾರದ ಕರ್ಫ್ಯೂಗೆ ಸಿಲಿಕಾನ್ ಸಿಟಿಯ ಕೆಲ ಕಡೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಆದರೆ ಹೋಟೆಲ್ ಮಾಲೀಕರು ಹಾಗೂ ಕೆಲ ಸಾರ್ವಜನಿಕರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾವುದೇ ಆದೇಶ ಹೊರಡಿಸುವ ಮೊದಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಬಳಿಕ ಜಾರಿ ಮಾಡಬೇಕೆಂದು ಹೇಳಿದ್ದಾರೆ. ಈ ಕುರಿತು ಈಟಿವಿ ಭಾರತದೊಂದಿಗೆ ಹೋಟೆಲ್ ಮಾಲೀಕರು ಮತ್ತು ಸಾರ್ವಜನಿಕರು ಮಾತನಾಡಿದ್ದಾರೆ.