ಕರ್ನಾಟಕ

karnataka

ETV Bharat / videos

ಮಳೆಗೆ ಕುಸಿದ ಮನೆಗೋಡೆ: ಮಹಿಳೆಗೆ ಗಾಯ - koppala news

By

Published : Oct 8, 2019, 5:05 AM IST

ಕೊಪ್ಪಳ: ಕೆಲ ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದ್ದು, ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೋರ್ವರು ಗಾಯಗೊಂಡಿದ್ದಾರೆ. ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರ ಪಟ್ಟಣದ 11ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ. ಅಪ್ಪಾಪುರ ಮಲ್ಲಪ್ಪ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದೆ. ಈ ಗೋಡೆ ಪಕ್ಕದ ತಗಡಿನ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿದ್ದ ಕೃಷ್ಣಾಬಾಯಿ ಭೀಮಸಾ ಎಂಬುವರು ಗಾಯಗೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details