ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಓಡಿಸಿದ ಎನ್. ಹೆಚ್. ಕೋನರೆಡ್ಡಿ....!! - karnatak bundh in hubballi
ರೈತ ವಿರೋಧಿ ಮಸೂದೆಯನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಕರೆನೀಡಿದ್ದ ಕರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರದ ಚೆನ್ನಮ್ಮ ವೃತ್ತದಲ್ಲಿ ಮಾಜಿ ಶಾಸಕ ಎನ್. ಹೆಚ್. ಕೋನರೆಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ, ಚನ್ನಮ್ಮ ವೃತ್ತವನ್ನು ಟ್ಯಾಕ್ಟರ್ ಮೂಲಕ ಸುತ್ತಿದರು.
Last Updated : Sep 28, 2020, 8:18 PM IST