ತೈಲ ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಆಟೋ ಚಾಲಕರಿಂದ ಪ್ರತಿಭಟನೆ - ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ
ತೈಲ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿ ಹುಬ್ಬಳ್ಳಿ ಆಟೋ ಚಾಲಕರು ಹಾಗೂ ಮಾಲೀಕರ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಆಟೋ ಚಾಲಕರು ಹಾಗೂ ಮಾಲೀಕರ ಸಂಘಟನೆ ಪದಾಧಿಕಾರಿಗಳು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದರು.