ಹುಬ್ಬಳ್ಳಿ: ಜಿಟಿ ಜಿಟಿ ಮಳೆಯಿಂದ ಜನಜೀವನ ಅಸ್ತವ್ಯಸ್ತ - ಮಳೆಯಿಂದಾಗಿ ವಾಣಿಜ್ಯ ನಗರಿ
ಹುಬ್ಬಳ್ಳಿ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಣಿಜ್ಯ ನಗರಿ ಸೇರಿದಂತೆ ಹಳ್ಳಿಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಒಂದು ವಾರದಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯಿಂದ ಹೊರಬರಲಾಗದೇ ಜನರು ಪರದಾಡುತ್ತಿದ್ದಾರೆ. ದಿನನಿತ್ಯದ ಕೆಲಸಗಳಿಗೆ ಹೋಗುವ ಜನರಿಗೂ ಮಳೆಯರಾಯ ಅಡ್ಡಿಯಾಗಿದ್ದು, ಜನರಲ್ಲಿ ಹಾಗೂ ರೈತರಲ್ಲಿ ಆತಂಕ ಹೆಚ್ಚಾಗಿದೆ.