ಕರ್ನಾಟಕ

karnataka

ETV Bharat / videos

ನನಗೆ ಕೊರೊನಾ ಸೋಂಕಿದೆ... ಪ್ಲೀಸ್​​ ಕಾಪಾಡಿ ಕಾಪಾಡಿ... ಯೋಧನ ರೋದನೆ - corona cases in hubli

By

Published : Mar 27, 2020, 6:42 PM IST

ನನಗೆ ಕೊರೊನಾ ಸೋಂಕಿದೆ ಕಾಪಾಡಿ ಎಂದು ಯೋಧರೊಬ್ಬರು ವಿಡಿಯೋ ಮೂಲಕ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಯೋಧ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದವರಾಗಿದ್ದು, ಮಾರ್ಚ್ 17ರಂದು ಹೈದರಾಬಾದ್‍ನಿಂದ ಗ್ರಾಮಕ್ಕೆ ಬಂದಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ದಯವಿಟ್ಟು ನನ್ನನ್ನು ಕಾಪಾಡಿ ಎಂದು ಕೇಳಿದ್ದಾರೆ. ಈಗ ನನ್ನ ತಾಯಿಯಲ್ಲೂ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಹುಬ್ಬಳ್ಳಿಯ ಕಿಮ್ಸ್ ವೈದ್ಯರು ವಿದೇಶದಿಂದ ಬಂದವರನ್ನು ಮಾತ್ರ ಪರೀಕ್ಷೆಗೆ ಒಳಡಿಸುತ್ತಿದ್ದಾರೆ. ನಿನಗೆ ಏನು ಆಗಿಲ್ಲ ಹೋಗು ಅಂತ ಹೇಳುತ್ತಿದ್ದಾರೆ. ದಯವಿಟ್ಟು ನನ್ನನ್ನು ಹಾಗೂ ನನ್ನ ಕುಟುಂಬವನ್ನು ಕಾಪಾಡಿ, ಸೂಕ್ತ ಚಿಕಿತ್ಸೆ ದೊರೆಯುವಂತೆ ಕ್ರಮಕೈಗೊಳ್ಳಿ ಎಂದು ಯೋಧ ಮನವಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details