ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದವನನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ಪೊಲೀಸರು! - hubli traffic police
ಹುಬ್ಬಳ್ಳಿ: ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. ಹೌದು, ವ್ಯಕ್ತಿಯೋರ್ವ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡು ಒದ್ದಾಡುತ್ತಿದ್ದ. ಇದನ್ನು ಕಂಡ ಹುಬ್ಬಳ್ಳಿಯ ಪೂರ್ವ ಸಂಚಾರಿ ಠಾಣೆಯ ಸಿಬ್ಬಂದಿ ಅವರನ್ನು ಆಟೋದಲ್ಲಿ ಹತ್ತಿಸಿ, ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸುವ ಮೂಲಕ ಸಹಾಯ ಮಾಡಿದ್ದಾರೆ.