ಕೆರೆಗೆ ಉರುಳಿದ ಬೃಹತ್ ಕಂಟೈನರ್.. ಕೆಲ ಕಾಲ ಟ್ರಾಫಿಕ್ ಜಾಮ್.. - accident news
ದೇವನಹಳ್ಳಿ: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ ಕೆರೆಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಬಳಿ ಘಟನೆ ನಡೆದಿದ್ದು, ನಾಲ್ಕು ಚಕ್ರದ ಸರಕು ಸಾಗಾಣಿಕೆಯ ವಾಹನಗಳನ್ನು ಕಂಟೈನರ್ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಕೆಲ ತಾಸು ದೇವನಹಳ್ಳಿ, ದೊಡ್ಡಬಳ್ಳಾಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.