ಸಂವಿಧಾನ ಕುರಿತು ಜಾಗೃತಿಗಾಗಿ ಚಾಮರಾಜನಗರದಲ್ಲಿ ಬೃಹತ್ ಜಾಥಾ - ಬೃಹತ್ ವಾಕ್ಥಾನ್ ನ್ಯೂಸ್
ಚಾಮರಾಜನಗರ: ಸಂವಿಧಾನದ ಕುರಿತು ಜಾಗೃತಿ ಮೂಡಿಸಲು ಇಂದು ನಗರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಬೃಹತ್ ಜಾಥಾ ನಡೆಸಲಾಯಿತು. ನ್ಯಾಯಾಲಯಗಳ ಸಂಕೀರ್ಣದಲ್ಲಿ ಕಾಲ್ನಡಿಗೆ ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ವಿ.ಪಾಟೀಲ್, ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿ ಹಸಿರು ನಿಶಾನೆ ತೋರಿದರು. ಜಾಥಾದಲ್ಲಿ ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.