ಗ್ರೀನ್‌ಸಿಟಿಗೆ ಪಿಂಕ್ ಬಣ್ಣ.. ಆಶಾ ಕಾರ್ಯಕರ್ತೆಯರ ಬೃಹತ್ ಧರಣಿ.. ಬೇಡಿಕೆಗಳ ಬಗ್ಗೆ ಇಲ್ಲಿದೆ ಡಿಟೇಲ್ಸ್!! - ಆಶಾ ಕಾರ್ಯಕರ್ತೆಯರ ಸಂಘದ ಪ್ರತಿಭಟನೆ
ಬೆಂಗಳೂರು: ಮಾಸಿಕ 12 ಸಾವಿರ ವೇತನ ನಿಗದಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ನಗರದ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 20 ಸಾವಿರ ಆಶಾ ಕಾರ್ಯಕರ್ತೆಯರು ನಗರದ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್‌ವರೆಗೂ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು ಎಂಬುದರ ಬಗ್ಗೆ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಈಟಿವಿ ಭಾರತ್‌ನೊಂದಿಗೆ ಮಾತನಾಡಿದ್ದಾರೆ.