ಕರ್ನಾಟಕ

karnataka

ಹುಳಿಮಾವು ಕೆರೆಯ ಕಟ್ಟೆ ಒಡೆದು ಅವಾಂತರ: ಸಾವಿರಾರು ಮನೆಗಳು ಜಲಾವೃತ

By

Published : Nov 24, 2019, 6:14 PM IST

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ಹುಳಿಮಾವು ಕೆರೆಯ ಕಟ್ಟೆ ಒಡೆದು ಭಾರಿ ಅವಾಂತರ ಸೃಷ್ಟಿಯಾಗಿದೆ. ಪರಿಣಾಮ ನೀರು ನುಗ್ಗಿ ಸಾವಿರಾರು ಮನೆಗಳು ಜಲಾವೃತಗೊಂಡಿವೆ. ಕೆರೆ ಬಳಿಯ ಸುಮಾರು ಮೂರು ಕಿಲೋಮೀಟರ್ ವರೆಗಿನ ಮನೆಗಳು ಜಲಾವೃತವಾಗಿವೆ. ಇಂದು ಬೆಳಗ್ಗೆ ಕೆರೆಯ ನೀರನ್ನು ಬೇರೆಡೆಗೆ ಹರಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಕೆರೆಯ ಕಟ್ಟೆ ಒಡೆದಿದ್ದು, ಹುಳಿಮಾವು ಕೆರೆ ಒಟ್ಟು 140 ಎಕರೆ ಇರುವುದರಿಂದ ಕೆರೆಯ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಸ್ಥಳದಿಂದ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ.

TAGGED:

ABOUT THE AUTHOR

...view details