ವೀಕೆಂಡ್ ಕರ್ಫ್ಯೂ ಎಫೆಕ್ಟ್: ಕೋತಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ಗೃಹರಕ್ಷಕ ದಳ ಸಿಬ್ಬಂದಿ - ಕೋತಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ಗೃಹರಕ್ಷಕ ದಳ ಸಿಬ್ಬಂದಿ
ಕೊರೊನಾ ಹಿನ್ನಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಹಂಪಿಯಲ್ಲಿ ಪ್ರವಾಸಿಗರು ಇಲ್ಲದಿರುವುದರಿಂದ ಕೋತಿಗಳ ಆಹಾರಕ್ಕೆ ಆಪತ್ತು ಬಂದಿದೆ. ಈ ಮುಂಚೆ ಹಂಪಿಗೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದರು. ಅವರು ಕೋತಿಗಳಿಗೆ ಆಹಾರ ನೀಡುತ್ತಿದ್ದರು. ಇದರಿಂದ ಕೋತಿಗಳ ಆಹಾರಕ್ಕೆ ತೊಂದರೆ ಆಗುತ್ತಿರಲಿಲ್ಲ. ಈಗ ಕೋತಿಗಳಿಗೆ ಆಹಾರವಿಲ್ಲದಿರುವುದನ್ನು ಗಮನಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ ಕೋತಿಗಳಿಗೆ ಆಹಾರ ನೀಡುತ್ತಿದ್ದಾರೆ. ಸಿಬ್ಬಂದಿಯ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
TAGGED:
ವೀಕೆಂಡ್ ಕರ್ಫ್ಯೂ ಎಫೆಕ್ಟ್