ಕರ್ನಾಟಕ

karnataka

ETV Bharat / videos

ಪತ್ನಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಗಂಡ...! - Husband killed to wife,

By

Published : Feb 26, 2020, 8:03 AM IST

ಪತ್ನಿಯ ಶೀಲ ಶಂಕಿಸಿ ಗಂಡನೊಬ್ಬ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ರಾಣೆಬೆನ್ನೂರು ನಗರದ ಅಡವಿ ಆಂಜನೇಯ ಬಡಾವಣೆಯ ನಿವಾಸಿಯಾದ ವಿರೂಪಾಕ್ಷಿ ಹಾಗೂ ಪತ್ನಿ ದುರಗಮ್ಮ ಕೊರವರ (49) ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ಬಂದ ವಿರೂಪಾಕ್ಷಿ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಇಬ್ಬರ ಮಧ್ಯೆ ಜಗಳವಾಗಿದ್ದು, ಕೋಪಗೊಂಡ ಪತಿ ತನ್ನ ಪತ್ನಿಯ ಮೇಲೆ ಕಲ್ಲು ಎತ್ತಿ ಹಾಕಿದ್ದ. ಇದರಿಂದ ತೀವ್ರವಾಗಿ ಗಾಯಗೊಂಡ ದುರಗಮ್ಮಳನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವಿಗೀಡಾಗಿದ್ದಾಳೆ. ಸದ್ಯ ಆರೋಪಿಯನ್ನು ರಾಣೆಬೆನ್ನೂರು ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ABOUT THE AUTHOR

...view details