ಕುಮಾರಸ್ವಾಮಿ ಸಣ್ಣ ಮಟ್ಟಕ್ಕೆ ಆಲೋಚನೆ ಮಾಡ್ತಾರೆ ಎಂದು ನನಗೆ ಅನಿಸಿರಲಿಲ್ಲ: ಸಿಟಿ ರವಿ - i did not feel that kumaraswamy was think cheaply ct ravi
ಚಿಕ್ಕಮಗಳೂರು: ರಾಮ ಮಂದಿರ ದೇಣಿಗೆ ವಿಚಾರವಾಗಿ ಹೇಳಿಕೆ ನೀಡಿದ್ದ ಹೆಚ್ಡಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕುಮಾರಸ್ವಾಮಿ ಸಣ್ಣ ಮಟ್ಟಕ್ಕೆ ಆಲೋಚನೆ ಮಾಡ್ತಾರೆ ಅಂತಾ ನನಗೆ ಅನಿಸಿರಲಿಲ್ಲ. ಎಲ್ಲಿ, ಯಾರು ಮೊಳೆ ಹೊಡೆಯುವ ಕೆಲಸ ಮಾಡಿದ್ದಾರೆ? ಎಲ್ಲಾ ಜಾತಿಯ ಜನ ಸ್ವಯಂ ಪ್ರೇರಿತವಾಗಿ ದೇಣಿಗೆ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಜನರು ಹಣ ಕೊಡುತ್ತಿದ್ದಾರೆ. ಜನರು ಭಕ್ತಿಯಿಂದ ಕೊಡುವ ಹಣ ಬೇಕೇ ಹೊರತು ದಬ್ಬಾಳಿಕೆಯಿಂದ ಪಡೆಯುವಂತದಲ್ಲ. ಕುಮಾರಸ್ವಾಮಿ ಯಾಕೆ ಹೀಗೆ ಮಾತನಾಡುತ್ತಿದ್ದಾರೆ. ಇದು ಅವರಿಗೆ ಗೌರವ ತರುವ ಸಂಗತಿಯಲ್ಲ. ಸುಳ್ಳು ಹೇಳುವ ಕೆಲಸ ಖಂಡನೀಯ ಎಂದು ತಿರುಗೇಟು ನೀಡಿದ್ದಾರೆ.