ಕಾಡು ಗೊಲ್ಲರನ್ನು ಜಾತಿ ಪಟ್ಟಿಗೆ ಸೇರಿಸಿದ್ದೇ ನಾನು: ಟಿಬಿ ಜಯಚಂದ್ರ - Kadugolla tribe news
ತುಮಕೂರು: ಕಾಡು ಗೊಲ್ಲರನ್ನು ಜಾತಿ ಪಟ್ಟಿಗೆ ಸೇರಿಸುವಲ್ಲಿ ಶ್ರಮವಹಿಸಿದ್ದು ನಾನು. ಆದರೆ, ಇದೀಗ ಬಿಜೆಪಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ಹೊರಟಿದೆ. ಆದರೆ, ಇದು ಕೇವಲ ಕಾಗದದಲ್ಲಿ ಮಾತ್ರ ಉಳಿಯಲಿದೆ ಎಂದು ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ತಿಳಿಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ವೇಳೆ, ಈಟಿವಿ ಭಾರತ ಜೊತೆ ಮಾತನಾಡಿದ ಅವರು ತುಮಕೂರು ಹಾಗೂ ಚಿತ್ರದುರ್ಗ ಭಾಗದಲ್ಲಿರುವ ಕಾಡು ಗೊಲ್ಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಶ್ರಮಪಟ್ಟಿದ್ದು ತಾವು, ಬಿಜೆಪಿಗರಲ್ಲ ಎಂದು ತಿಳಿಸಿದ್ದಾರೆ.