ದೇಶ ವಿರೋಧಿ ಘೋಷಣೆ ಕೂಗುವವರಿಗೆ ಗುಂಡಿಕ್ಕಲು ಕಾನೂನು ತನ್ನಿ: ಕೇಂದ್ರಕ್ಕೆ ಬಿ ಸಿ ಪಾಟೀಲ್ ಮನವಿ
ಬೆಂಗಳೂರು: ದೇಶ ವಿರೋಧಿ ಘೋಷಣೆ ಕೂಗುವವರನ್ನ ಗುಂಡಿಟ್ಟು ಹತ್ಯೆ ಮಾಡಲು ಶೂಟ್ ಅಟ್ ಸೈಟ್ ಕಾನೂನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ. ಅಧಿವೇಶನಕ್ಕೆ ಹಾಜರಾಗಲು ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಘೋಷಣೆ ಕೂಗುವುದು ಇಂದಿನ ದಿನಗಳಲ್ಲಿ ಫ್ಯಾಶನ್ ಆಗಿದ್ದು, ದೇಶಭಕ್ತಿಗೆ ಧಕ್ಕೆ ತರುವ ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಒಂದು ವೇಳೆ ಪಾಕಿಸ್ತಾನದಲ್ಲಿ ಈ ರೀತಿಯ ಘೋಷಣೆ ಕೂಗಿದ್ರೆ ನಡು ರಸ್ತೆಯಲ್ಲೇ ನಿಲ್ಲಿಸಿ ಶಿರಚ್ಛೇದ ಮಾಡುತ್ತಾರೆ. ನಮ್ಮ ದೇಶ ಅಷ್ಟೊಂದು ಕ್ರೂರವಾಗಿಲ್ಲ. ಆದ್ರೆ ಇಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದಿದ್ದಾರೆ.