ಅತ್ಯಾಧುನಿಕ ಆಸ್ಪತ್ರೆಗಳಿರುವ ಮಂಗಳೂರಿನಲ್ಲಿ ದ್ವಿಶತಕದತ್ತ ಸಾವಿನ ಸಂಖ್ಯೆ - Increase in corona death
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ನಡುವೆ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 10 ಮಂದಿ ಸಾವನ್ನಪ್ಪಿದ್ದಾರೆ. ಒಂದೇ ದಿನ 10 ಮಂದಿ ಮೃತಪಟ್ಟಿರುವುದು ಇದು 2ನೇ ಬಾರಿ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 190 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಹಲವು ಮೆಡಿಕಲ್ ಕಾಲೇಜು, ಅತ್ಯಾಧುನಿಕ ಖಾಸಗಿ ಆಸ್ಪತ್ರೆಗಳು ಇದ್ದರೂ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗಿರುವುದು ಆತಂಕಕ್ಕೆ ಕಾರಣವಾಗಿದೆ.