ಚಿತ್ರದುರ್ಗದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ: ಮಾರುಕಟ್ಟೆಗೆ ಬರಲು ಗ್ರಾಹಕರ ಹಿಂದೇಟು
ಚಿತ್ರದುರ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವುದರಿಂದ ಹಬ್ಬದ ನಡುವೆಯೂ ಜನರಲ್ಲಿ ಆತಂಕ ಮನೆಮಾಡಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹೂವು, ಹಣ್ಣು ಖರೀದಿಸಲೂ ನಾಗರಿಕರು ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇತ್ತ ನಾಳೆಯೇ ವರಮಹಾಲಕ್ಷ್ಮಿ ಪೂಜೆ ಇದ್ದರೂ ಕೂಡ ವ್ಯಾಪಾರವಿಲ್ಲದೆ ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಹೂವು, ಹಣ್ಣು, ತರಕಾರಿಗಳ ಬೆಲೆಯೂ ಕುಸಿತ ಕಂಡಿದ್ದರಿಂದ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.