ದಾವಣಗೆರೆಯ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ - ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ
ದಾವಣಗೆರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗುತ್ತಿರುವುದು ಜನರಲ್ಲಿ ಆತಂಕ ಹೆಚ್ಚಿಸಿದ್ದರೆ, ಇತ್ತ ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಜಿಲ್ಲೆಯ ಹೊನ್ನಾಳಿ, ಹರಿಹರ, ಚನ್ನಗಿರಿಯಲ್ಲಿ ನಿತ್ಯವೂ ಸೋಂಕು ದೃಢಪಡುತ್ತಿದ್ದು, ಸೋಂಕಿತರ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚುವುದು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ. ನಿನ್ನೆ ಒಂದೇ ದಿನ 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇತ್ತ, 324 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.