ಹಾವೇರಿಯಲ್ಲಿ ಹೆಚ್ಚಾಗುತ್ತಿವೆ ಕೊರೊನಾ ಪ್ರಕರಣ, ನಿಯಂತ್ರಣಕ್ಕೆ ಖಾಸಗಿ ವೈದ್ಯರು ಸಾಥ್! - Haveri corona News
ಹಾವೇರಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದೆ. ಇದರ ಬೆನ್ನಲ್ಲೇ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮಗಳನ್ನ ಕೈಗೊಂಡಿದೆ. ಜಿಲ್ಲೆಯಲ್ಲಿರುವ ಆಯುಶ್ ಇಲಾಖೆ ಅಡಿಯಲ್ಲಿ ಖಾಸಗಿ ವೈದ್ಯರು ಸಹ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಮನೆ ಮನೆಗೆ ತೆರಳಿ ವ್ಯಕ್ತಿಗಳ ವಿವರಣೆ ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಅವರಿಗೆ ಅಲ್ಲಿಯೇ ಸ್ಥಾಪಿಸಲ್ಪಟ್ಟ ತಾತ್ಕಾಲಿಕ ಕ್ಲಿನಿಕ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.